ಎಸ್.ಡಿ.ಎಮ್. ಆಯುರ್ವೇದ ಆಸ್ಪತ್ರೆಯಲ್ಲಿ  ಸ್ತನ್ಯಪಾನ ಸಪ್ತಾಹ – 2021

ವಿಶ್ವ ಆರೋಗ್ಯ ಸಂಸ್ಥೆ ಸ್ತನ್ಯಪಾನದ ಜಾಗೃತಿ ಮೂಡಿಸಲು ಸ್ತನ್ಯಪಾನ ಸಪ್ತಾಹವನ್ನು ಪ್ರತಿವರ್ಷ ಆಚರಿಸುತ್ತದೆ. ಇದರ ಅಂಗವಾಗಿ ನಮ್ಮ ಎಸ್.ಡಿ.ಎಮ್. ಆಯುರ್ವೇದ ಆಸ್ಪತ್ರೆಯಲ್ಲಿ ಮಾಹಿತಿ ಉಪನ್ಯಾಸವನ್ನು ಮಂಗಳವಾರದಂದು ಆಚರಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ.ಯವರು ವಹಿಸಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ‘ಪ್ರಾಚೀನ ಕಾಲದ ಸ್ತನ್ಯಪಾನದ ಪದ್ಧತಿಗಳು ಹಾಗೂ ಇಂದು ಅದರ ಮಹತ್ವ’ದ ಕುರಿತು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಕರಾದ ಡಾ. ನಾಗರಾಜ್ ಎಸ್. ಇವರು ಸ್ತನ್ಯಪಾನದ ಕುರಿತು ಸಾಂದರ್ಭಿಕ ಮಾತುಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿ ಯಾಗಿ ಬಾಲರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಡಾ. ಕಾವ್ಯರವರು ‘ಮಕ್ಕಳ ಬೆಳವಣಿಗೆಯಲ್ಲಿ ಸ್ತನ್ಯಪಾನದ ಮಹತ್ವ ವಿಧಿವಿಧಾನಗಳು’ ಇದರ ಕುರಿತು ವಿಸ್ತಾರವಾಗಿ ವಿವರಿಸಿದರು.
ಸ್ನಾತಕೋತ್ತರ ವಿದ್ಯಾರ್ಥಿನಿಗಳಾದ ಡಾ. ಪದ್ಮನಯನಾ, ಡಾ. ಅಂಜು ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು. ಡಾ. ಪ್ರೃಥ್ವಿರಾಜ್ ಪುರಾಣಿಕ್, ವಿಭಾಗ ಮುಖ್ಯಸ್ಥರು, ಸ್ವಾಗತವನ್ನು ಕೋರಿದರು. ಕೊನೆಯದಾಗಿ ಆಗಮಿಸಿರುವ ಎಲ್ಲಾ ಅತಿಥಿಗಳಿಗೆ ಡಾ. ರಾಜಶ್ರೀ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಇವರು ಧನ್ಯವಾದಗಳನ್ನು ಸಮರ್ಪಿಸಿದರು.

ಡಾ. ಪೂಜಾ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಕಾರ್ಯಕ್ರಮ ನಿರೂಪಿಸಿದರು. ಸಹಪ್ರಾಧ್ಯಾಪಕರಾದ ಡಾ. ಶರಶ್ಚಂದ್ರ ಆರ್, ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರತ್ನ ಎಸ್.ಜೆ. ಹಾಗೂ ಡಾ. ಚಿತ್ರಲೇಖ ಇವರು ಕಾರ್ಯಕ್ರಮದಲ್ಲಿ ಸಹಕರಿಸಿದರು.ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು, ಒಳರೋಗಿಗಳು ಹಾಗೂ ಹೊರರೋಗಿಗಳು, ಅಗದತಂತ್ರ, ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 50 ಜನರು ಪಾಲ್ಗೊಂಡಿದ್ದರು. 

 
 
 
 
 
 
 
 
 
 
 

Leave a Reply