ಆರು ದಿನಗಳ ರಕ್ತ ಪ್ರದೋಷ ವ್ಯಾಧಿ ವೈಜ್ಞಾನಿಕ ಕಾರ್ಯಗಾರದ ಸಮಾರೋಪ

ಉಡುಪಿ: ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಆಯುರ್ವೇದ ಕಾಲೇಜಿನ ಕಾಯಚಿಕಿತ್ಸಾ ಮತ್ತು ಮಾನಸರೋಗ ವಿಭಾಗ ಹಾಗೂ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ, ಆಯುಷ್ ಮಂತ್ರಾಲಯ, ಭಾರತ ಸರಕಾರ,ಹೊಸ ದೆಹಲಿ ಇವರ ಜಂಟಿ ಸಹಭಾಗಿತ್ವದಲ್ಲಿ ಆಯುಷ್ ಆಯುರ್ವೇದ ವೈದ್ಯರಿಗಾಗಿ ಆರು ದಿನಗಳ ರಕ್ತ ಪ್ರದೋಷ ವ್ಯಾಧಿ ಎಂಬ ವೈಜ್ಞಾನಿಕ ಕಾರ್ಯಗಾರದ ಸಮಾರೋಪ ಸಮಾರಂಭ ಶನಿವಾರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಜರುಗಿತು.

 ಡಾ. ಎ.ಎಸ್. ಪ್ರಶಾಂತ್, ಪ್ರಾಂಶುಪಾಲರು, ಸರಕಾರಿ ಆಯುರ್ವೇದ ಮಹಾವಿದ್ಯಾಲಯ, ಹುಬ್ಬಳ್ಳಿ ಹಾಗೂ ಡಾ. ಅನಿಲ್ ಪಾಂಸ್ಸೆ, ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥರು, ಗೋಮಂತಕ್ ಆಯುರ್ವೇದ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ, ಗೋವೆ ರಾಜ್ಯ. ಅಧ್ಯಕ್ಷೆ ಡಾ.ಮಮತಾ ಕೆ.ವಿ., ವೈದ್ಯಕೀಯ ಅಧೀಕ್ಷಕರು ಹಾಗೂ ಪ್ರಭಾರ ಪ್ರಾಂಶುಪಾಲರು, ಎಸ್.ಡಿ.ಎಮ್. ಆಯುರ್ವೇದ ಕಾಲೇಜು, ಕುತ್ಪಾಡಿ, ಉಡುಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ನಿರಂಜನ್ ರಾವ್, ಸಹಾಯಕ ಮುಖ್ಯಸ್ಥ ಡಾ. ನಾಗರಾಜ, ಎಸ್.ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವೀರಕುಮಾರ ಕೆ., ಮುಖ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕಾಯಚಿಕಿತ್ಸಾ ಹಾಗೂ ಮಾನಸರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ರೀಲತಾ ಕಾಮತ್ ಟಿ., ಸಂಘಟನಾ ಕಾರ್ಯದರ್ಶಿ ಹಾಗೂ ಸಹ ಪ್ರಾಧ್ಯಾಪಕ ಡಾ. ವಿಜಯೇಂದ್ರ ಭಟ್‌ ಉಪಸ್ಥಿತರಿದ್ದರು.

 

 ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಧನೇಶ್ವರಿ ಎಚ್.ಎ. ಇವರು ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕ ಡಾ. ನಿಶಾಂತ್ ಪೈ ಕೆ ಕಾರ್ಯಾಗಾರದ ಸಾರಾಂಶವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಕಾರ್ಯಾಗಾರದ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಅತಿಥಿಗಳಿಂದ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಜಯೇಂದ್ರ ಭಟ್ ಇವರು ವಂದಿಸಿ, ಡಾ. ರಕ್ಷಿತಾ ನಿರೂಪಿಸಿದರು.

 
 
 
 
 
 
 
 
 
 
 

Leave a Reply