ಉಡುಪಿ: ಪ್ರಸಿದ್ಧ ವೈದ್ಯ ಡಾ.ಶ್ರೀಧರ ಹೊಳ್ಳರವರು ನಿಧನ

ಉಡುಪಿ: ನಗರದ ಪ್ರಸಿದ್ಧ ವೈದ್ಯರು, ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ(67) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಉಡುಪಿಯ ಕಲ್ಪನಾ ಚಿತ್ರಮಂದಿರ ಬಳಿ ಇರುವ ಮಿತ್ರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ರೋಗಿಗಳಿಗೆ ನಗುಮೋಗದ ಸೇವೆ ನೀಡುತ್ತಿದ್ದ ಇವರು ಡಿ.17 ರಂದು ಮನೆಯಲ್ಲಿ ಕುಸಿದು ಬಿದ್ದಿದ್ದರು.

ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನ ಕಾಯಿಲೆಗೆ ತುತ್ತಾಗಿದ್ದ ಇವರು ನಲ್ವತ್ತು ದಿನಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಳ್ಳ ಅವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೃತರು ಪತ್ನಿ, ಮೂವರು ವೈದ್ಯರಾದ ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಇಂದು ಬೆಳಿಗ್ಗೆ 9 ಗಂಟೆಗೆ ಡಯಾನ ಚಿತ್ರಮಂದಿರದ ಬಳಿ ಇರುವ ಅವರ ಮನೆಗೆ ತರಲಿದ್ದು, ಬಳಿಕ ಅಂತ್ಯಕ್ರಿಯೆಯು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆಂದು ಕುಟುಂಬ ಮೂಲಗಳು ತಿಳಿಸಿವೆ.

 
 
 
 
 
 
 

Leave a Reply