Janardhan Kodavoor/ Team KaravaliXpress
32.6 C
Udupi
Sunday, February 5, 2023
Sathyanatha Stores Brahmavara

ಸಿದ್ದರಾಮಯ್ಯನವರಿಗೆ ಕೊರೋನಾ ಪಾಸಿಟೀವ್ 

ಬೆಂಗಳೂರು: ಜ್ವರದಿಂದ ಬಳಲುತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ದೃಢಪಟ್ಟಿದೆ.​ ಸಿದ್ದರಾಮಯ್ಯನವರಿಗೆ ಮೂತ್ರನಾಳದ ಸಮಸ್ಯೆಯಿದ್ದು, ಎರಡು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಫಲಿತಾಂಶದಲ್ಲಿ ಪಾಸಿಟಿವ್ ಬಂದಿದ್ದು ಯಾರೂ ಆತಂಕ ಪಡಬೇಡಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.​ 

ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕ ಪಡುವ ಅವಶ್ಯ ಇಲ್ಲ. ಕೆಲವು ದಿನದಿಂದ ನನ್ನ ಜೊತೆ ಸಂಪರ್ಕದಲ್ಲಿರುವವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!