ಕಸ್ತೂರ್ಬಾ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಮಾತುಕತೆ

ಮಣಿಪಾಲ: ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗವು ಜ.29ಕ್ಕೆ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್ ನ ಹೊರರೋಗಿ ವಿಭಾಗದಲ್ಲಿ ಗರ್ಭಕಂಠದ ಕ್ಯಾನ್ಸರ್ ನ ಕುರಿತು ಜಾಗೃತಿ ಮಾತುಕತೆ ಆಯೋಜಿಸಿತ್ತು .

ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ದಾದಿಯರಾದ ಶ್ರೀಮತಿ ಅಖಿಲಾ ಶೆಟ್ಟಿ ಮತ್ತು ಶ್ರೀಮತಿ ಪುಷ್ಪಲತಾ ಅವರು ಗರ್ಭಕಂಠದ ಕ್ಯಾನ್ಸರ್ ಮುಂಚಿತವಾಗಿ ಪತ್ತೆ ಹಚ್ಚುವಿಕೆ ಮತ್ತು ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸಿದರು. ಮಾತುಕತೆಯ ನಂತರ ಸಂವಾದ ಕಾರ್ಯಕ್ರಮ ನಡೆಯಿತು. ಕ್ಯಾನ್ಸರ್ ತಜ್ಞ ವೈದ್ಯರು ಸಾರ್ವಜನಿಕರ ಎಲ್ಲಾ ಅನುಮಾನಗಳಿಗೆ ಮತ್ತು ಪ್ರಶ್ನೆಗಳಿಗೆ ಉತ್ತರಿಸಿದರು. ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಮತ್ತು ಮುಖ್ಯಸ್ತ ಡಾ.ನವೀನ ಕುಮಾರ್, “ಜನವರಿಯು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಮಾಸವಾಗಿದ್ದು, ಆರಂಭಿಕ ತಪಾಸಣೆ ಮತ್ತು ಹ್ಯೂಮನ್ ಪ್ಯಾಪಿಲೋಮವೈರಸ್ (ಎಚ್ಪಿವಿ) ಲಸಿಕೆಗಳು ಕ್ಯಾನ್ಸರ್ ತಡೆಗಟ್ಟಲು ಹೇಗೆ ಸಹಾಯ ಮಾಡುತ್ತದೆ ಎಂಬುದರ ಬಗ್ಗೆ ಉಲ್ಲೇಖಿಸಿದರು. ಗರ್ಭಕಂಠದ ಕ್ಯಾನ್ಸರ್ ಒಂದು ಕಾಲದಲ್ಲಿ ಭಾರತದ ಮಹಿಳೆಯರಲ್ಲಿ ಅಧಿಕವಿದ್ದು, ಉತ್ತಮ ಅರಿವಿನೊಂದಿಗೆ, ನಾವು ಈ ಕ್ಯಾನ್ಸರ್ ನಿರ್ಮೂಲನೆ ಮಾಡಬಹುದು ಎಂದು ಹೇಳಿದರು”.

ಗರ್ಭಕಂಠದ ಕ್ಯಾನ್ಸರ್ ಸಾಮಾನ್ಯವಾಗಿ ಮಧ್ಯಮ ವಯಸ್ಸಿನ ಮಹಿಳೆಯರಲ್ಲಿ ಮತ್ತು ನಿಯಮಿತವಾಗಿ ತಪಾಸಣೆಗೆ ಒಳಗಾಗದ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಆರಂಭಿಕ ಹಂತದಲ್ಲಿ ತಪಾಸಣೆ ಮತ್ತು ಪತ್ತೆಯಾದಲ್ಲಿ ಈ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಹೇಳಿದರು.

 

ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ . ನವಾಜ್ ಉಸ್ಮಾನ್ , ಡಾ. ಕೇಶವರಜನ್ , ಡಾ. ಪ್ರೀತಿ ಶೆಟ್ಟಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply