ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಸಿಕಾ ಅಭಿಯಾನ – ಶಾಸಕ ರಘುಪತಿ ಭಟ್ ಚಾಲನೆ

ಉಡುಪಿ: 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ “ವ್ಯಾಕ್ಸಿನ್ ಅಭಿಯಾನ” ನಡೆಯುತ್ತಿದ್ದು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಲಸಿಕಾ ಅಭಿಯಾನಕ್ಕೆ ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಚಾಲನೆ ನೀಡಿದರು.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಸದಸ್ಯರಾದ ಶಾಲಿನಿ ಆಚಾರ್ಯ, ಪ್ರಶಾಂತ್ ಹೆಬ್ಬಾರ್, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ, ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪ್ರೀಮಾ ಹಾಗೂ ಕಾಲೇಜಿನ ಉಪನ್ಯಾಸಕರು, ವೈದ್ಯಕೀಯ ಸಿಬ್ಬಂದಿಯವರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply