ಯು.ಪಿ.ಎಂ.ಸಿ- ಬೂಸ್ಟರ್ ಲಸಿಕೆ ವಿತರಣೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಗರ ಆರೋಗ್ಯ ಕೇಂದ್ರ ಮಣಿಪಾಲ ಇವರ ಸಹಯೋಗದೊಂದಿಗೆ ಬೂಸ್ಟರ್ ಲಸಿಕಾ ವಿತರಣಾ ಕಾರ್ಯಕ್ರಮವು ಜುಲೈ 22ರಂದು ನಡೆಯಿತು. 

ಕಾಲೇಜಿನ ಪ್ರಾಚಾರ್ಯರಾದ ಡಾ.ಮಧುಸೂದನ್ ಭಟ್ ರವರು ಬೂಸ್ಟರ್ ಲಸಿಕೆಯನ್ನು ಮೊದಲಾಗಿ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ 100 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆದುಕೊಂಡರು. ನಗರ ಆರೋಗ್ಯ ಕೇಂದ್ರ ಮಣಿಪಾಲ ಇದರ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಈ ಕಾರ್ಯಕ್ರಮ ನಡೆಸಿಕೊಟ್ಟರು.  

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್, ಸಹಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply