ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರಿಕರಿಗೂ ಇನ್ಮುಂದೆ ಸಿಗಲಿದೆ ಕೊರೋನಾ ಲಸಿಕೆ

ಬೆಂಗಳೂರು: ಕೆಲವು ಹಿರಿಯ ನಾಗರಿಕರಿಗೆ ಆಧಾರ್ ಕಾರ್ಡ್ ಇಲ್ಲ ,ಅಂತವರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದೆ. ಶ್ರೀಘ್ರವೇ ಲಸಿಕೆ ಅವರಿಗೂ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಶಶಿಕಲಾ ಜೊಲ್ಲೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ,ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೋನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆ ನೀಡಬೇಕು.ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

 
 
 
 
 
 
 
 
 
 
 

Leave a Reply