ಉಡುಪಿ: ಜಿಲ್ಲೆಯಲ್ಲಿ ಜೂನ್ 19ರ ಶನಿವಾರ ನೀಡುವ ಲಸಿಕೆ ಬಗ್ಗೆ ಮಾಹಿತಿ

Coronavirus COVID-19 single dose small vials and multi dose in scientist hands concept. Research for new novel corona virus immunization drug.

ಉಡುಪಿ: ಜಿಲ್ಲೆಯಲ್ಲಿ ಜೂನ್ 19ರ ಶನಿವಾರ ನೀಡುವ ಲಸಿಕೆ ಬಗ್ಗೆ ಮಾಹಿತಿ ಇಲ್ಲಿದೆ.

• ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.

• ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಅಪರಾಹ್ನ 9.30 ರಿಂದ 4.30 ರ ವರೆಗೆ)- ದಿನಾಂಕ 25/06/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)

• ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)

• ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)

• ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ-(130 ಡೋಸ್ ಲಭ್ಯ)

• 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು ೨ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)

• ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ-(100 ಡೋಸ್ ಲಭ್ಯ)

• ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ) (ಸಮಯ: ಅಪರಾಹ್ನ 2.00 ರಿಂದ 4.30 ರ ವರೆಗೆ)- 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)

• ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (50 ಡೋಸ್ ಲಭ್ಯ)

• ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 19.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋಡಲ್ ಅಧಿಕಾರಿ ಬದಲಾವಣೆ:

ಉಡುಪಿ ತಾಲೂಕು ವ್ಯಾಪ್ತಿಗೆ ಒಳಪಡುವ ಮಾಧವ ಕೃಪಾ ಶಾಲೆ, ಮಣಿಪಾಲ ಇಲ್ಲಿ ಕೋವಿಡ್ ಲಸಿಕಾ ಕೇಂದ್ರದ ನೋಡಲ್ ಅಧಿಕಾರಿಯಾಗಿ ನಾಗರಾಜ ವಿಷಯ ಪರಿವೀಕ್ಷಕರು, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮೊ.ನಂ- 9449964968 ಇವರನ್ನು ನೇಮಕ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply