Janardhan Kodavoor/ Team KaravaliXpress
27 C
Udupi
Thursday, December 3, 2020

ಕೋವಿಡ್ 19 ನಿರ್ಮೂಲನೆವಾಗುವರೆಗೆ ಜಾಗೃತಿ ವಹಿಸಿ : ದಿನಕರ ಬಾಬು

ಉಡುಪಿ ನವೆಂಬರ್ 13 (ಕರ್ನಾಟಕ ವಾರ್ತೆ):-ಕೋವಿಡ್ 19 ಗೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಲಭ್ಯವಾಗಿ, ಈ ರೋಗ ಜಾಗತಿಕವಾಗಿ ನಿರ್ಮೂಲನೆವಾಗುವವರೆಗೆ ಸಾರ್ವಜನಿಕರು ಕೋವಿಡ್ ನಿಯಂತ್ರಣಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು
ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಅವರು ಶುಕ್ರವಾರ, ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆವರಣದಲ್ಲಿ, ಕೋವಿಡ್19 ಕುರಿತಂತೆ ಜಿಲ್ಲೆಯಾದ್ಯಂತ ಎಲ್.ಇ.ಡಿ. ವಾಹನದ ಮೂಲಕ ನಡೆಯುವ ವಿಶೇಷ ಜಾಗೃತಿ ಪ್ರಚಾರ ಕಾರ್ಯಕ್ರಮದ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಸಾರ್ವಜನಿಕರು ಜಿಲ್ಲೆಯಲ್ಲಿ ಕೋವಿಡ್19 ಇಲ್ಲ ಎಂದು
ಮೈಮರೆಯದೇ , ಸಂಪೂರ್ಣವಾಗಿ ಈ ರೋಗ ನಿರ್ಮೂಲನೆವಾಗುವವರೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು,
ಸಾಮಾಜಿಕ ಅಂತರ ಪಾಲನೆ ಮತ್ತು ಕೈಗಳ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು, ಕೋವಿಡ್ ಲಕ್ಷಣಗಳಿದ್ದಲ್ಲಿ ಕೂಡಲೇ
ಪರೀಕ್ಷಿಸಿ ಕೊಳ್ಳುವಂತೆ ದಿನಕರ ಬಾಬು ಹೇಳಿದರು.ಉಡುಪಿ ಜಿಲ್ಲೆಯಾದ್ಯಂತ ಪ್ರತಿದಿನ 10 ಗ್ರಾಮಗಳಲ್ಲಿ 18 ದಿನಗಳ ಕಾಲ ಒಟ್ಟು 180 ಗ್ರಾಮಗಳಲ್ಲಿ ಸಂಚರಿಸುವ ಈ ಎಲ್.ಇ.ಡಿ ವಾಹನಗಳು ಬೈಹತ್ ಎಲ್.ಇ.ಡಿ ಪರದೆಯ ಮೂಲಕ ಗ್ರಾಮೀಣ ಭಾಗದಲ್ಲಿ ಕೋವಿಡ್19 ಪಿಡುಗನ್ನು ತಡೆಗಟ್ಟಲು ಸಾರ್ವಜನಿಕರು ಕೈಗೊಳ್ಳಬೇಕಾದ ಸುರಕ್ಷತಾ/ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ವಾರ್ತಾ ಸಹಾಯಕ ಶಿವಕುಮಾರ್ ಬಿ ಹಾಗೂ ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ವ್ಯಕ್ತಗೊಂಡ ಪ್ರಮೋದಾಂತರಂಗ

ನನ್ನನ್ನು ಜನಪ್ರತಿನಿಧಿಯಾಗಿ ಆಯ್ಕೆ ಮಾಡಿದಾಗ ನನ್ನ ಮನಸ್ಸಿನಲ್ಲಿ ನಾನು ಅಧಿಕಾರಕ್ಕಾಗಿ ಕೆಲಸ ಮಾಡಬಾರದು, ನನ್ನ ಕೆಲಸ ಜನರಿಗೆ ಅಧಿಕಾರ ನೀಡುವಂತಿರಬೇಕು ಎಂಬುದಾಗಿತ್ತು. ನಾನು ಕೇವಲ ರಾಜಕೀಯ ಮಾಡುವುದಿದ್ದರೇ ಹೇಗೂ ಮಾಡಬಹುದು, ರಾಜಕೀಯ ವೃತ್ತಿಯಲ್ಲ ಅದೊಂದು...

Click: Swathi Shenoy

Indian Roller.... State bird of Karnataka.. Clicked at Haleangadi

ಪಣಂಬೂರಿನಲ್ಲಿ ಸಚಿವರಿಂದ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ

ಮಂಗಳೂರು: ಪೊಲೀಸ್ ವಸತಿ ಯೋಜನೆ 2020ರ ಅಡಿಯಲ್ಲಿ ಮಂಗಳೂರು ನಗರ ಪೊಲೀಸ್ ಸಿಬ್ಬಂದಿಗಾಗಿ ಪಣಂಬೂರಿನಲ್ಲಿ ರೂ.21.57 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಪೊಲೀಸ್ ವಸತಿ ಗೃಹಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ...

‘ಪೊರ್ಲುಡೆ ಪೊರ್ಲು ನಮ್ಮ ತುಳುನಾಡು’~ತುಳು ಲಿಪಿ ಪರೀಕ್ಷೆ 

ಮಲ್ಪೆ~ ​‘ಪೊರ್ಲುಡೆ ಪೊರ್ಲು ನಮ್ಮ ತುಳುನಾಡು’. ತುಳುವರ ಮಾತೃಭಾಷೆ ತುಳು. ಈ ಸುಂದರ​ಭಾಷೆಯನ್ನು ಎಷ್ಟು ಬಣ್ಣಿಸಿದರೂ ಸಾಲದು. ಮೇರು ಮಟ್ಟದ ಇತಿಹಾಸ ಇರುವ ತುಳುಭಾಷೆಗೆ ಸ್ವಂತ ಲಿಪಿ ಇದೆ​ಎಂದು ಡಾ|ವೆಂಕಟರಾಜ ಪುಣಿಂಚಿತ್ತಾಯರು ತಮ್ಮ...

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದ್ರವರೂಪದ ಆಮ್ಲಜನಕ ಸ್ಥಾವರ ಉದ್ಘಾಟಿಸಿದ ಸಚಿವ ಬೊಮ್ಮಾಯಿ

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾದ ದ್ರವರೂಪದ ಆಮ್ಲಜನಕದ ಸ್ಥಾವರ (ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್)ನ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಗುರುವಾರ ನೆರವೇರಿಸಿದರು.50ಲಕ್ಷ ರೂ. ವೆಚ್ಚದಲ್ಲಿ...
error: Content is protected !!