ಉಡುಪಿಯಲ್ಲಿ ಅಹವಾಲು ಸ್ವೀಕರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಜ್ಯ ಮುಜರಾಯಿ, ಮೀನು ಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕ ರಿಸಿದರು.

ನೂರಾರು ಮಂದಿ ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ಸಚಿವರಲ್ಲಿ ತಿಳಿಸಿ, ಪರಿ ಹಾರಕ್ಕೆ ಮನವಿ ಮಾಡಿದರು. ಎಲ್ಲರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸಾರ್ವಜನಿಕರಿಗೆ ಸ್ಪಂದಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಕಲ್ಪನೆ ಯೋಜನೆಯನ್ನು ಮೀನು ಗಾರಿಕಾ ಇಲಾಖೆ ಮೂಲಕ 10ಸಾವಿರ ಮಂದಿಗೆ ಸ್ವಯಂ ಉದ್ಯೋಗ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 100 ತರಬೇತಿ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿ ದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ ಸುವರ್ಣ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಮೊದಲಾದವರಿದ್ದರು.

 
 
 
 
 
 
 
 
 

Leave a Reply