ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಿಗದಿ

ಉಡುಪಿ : ಉಡುಪಿ ಜಿಲ್ಲಾ ಯುವ ಕಾಂಗ್ರೇಸ್ ಕಾರ್ಯಕಾರಿಣಿ ಸಭೆಯು ಆಗಸ್ಟ್ 26 ರ ಅಪರಾಹ್ನ 2:30ಕ್ಕೆ ಉಡುಪಿ ಬ್ರಹ್ಮ ಗಿರಿ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ.

ಈ ಕಾರ್ಯಕಾರಿಣಿ ಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣ, ಕರ್ನಾಟ ಕ ರಾಜ್ಯ ಯುವ ಕಾಂಗ್ರೇಸ್ ಉಪಾಧ್ಯಕ್ಷ ರಾದ ಕೆಂಪರಾಜ್ ಗೌಡ , ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷರಾದ ಮಿಥುನ್ ರೈ ಯವರು ಆಗಮಿಸಲಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲೆಯ ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗು ಪಕ್ಷದ ಮುಖಂಡರು ಭಾಗವಹಿಸಲಿ ದ್ದಾರೆ.

ಈ ಸಭೆಯಲ್ಲಿ ಜಿಲ್ಲೆಯ ಯುವ ಕಾಂಗ್ರೆಸ್ ಪಧಾದಿಕಾರಿಗಳು, ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗು ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾ, ವಿಧಾನ ಸಭಾ ಹಾಗೂ ಬ್ಲಾಕ್ ಮಟ್ಟದ ಸಂಯೋಜ ಕರುಗಳು ಕಡ್ಡಾಯವಾಗಿ ಹಾಜರಿರಬೇಕಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾದ ವಿಶ್ವಾಸ್ ವಿ. ಅಮೀನ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply