ಕಸ ವಿಲೇವಾರಿ: ಪ್ರಗತಿ ಪರಿಶೀಲನಾ ಸಭೆ

ಉಡುಪಿ ನಗರಸಭೆಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯತ್ ಗಳ ಕಸ ವಿಲೇವಾರಿ ಕುರಿತಾಗಿ ಪ್ರಗತಿ ಪರಿಶೀಲನಾ ಸಭೆಯು ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅವರವರ ಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಶಾಸಕರು, ನಗರ ಸಭೆಗೆ ಹೊಂದಿಕೊಂಡಿರುವ ಎಲ್ಲಾ ಪಂಚಾ ಯತ್ ವ್ಯಾಪ್ತಿಯ ಪ್ರತಿ ಮನೆ ಮನೆಯ ಕಸಗಳನ್ನು ಅಕ್ಟೋಬರ್ ತಿಂಗಳಿನಿಂದ ವ್ಯವಸ್ಥಿತವಾಗಿ ಸಂಗ್ರಹಿಸುವಂತೆ ಅಧಿಕಾರಿ ಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷ ಸಂಧ್ಯಾ ಕಾಮತ್, ಉಪಾಧ್ಯಕ್ಷ ಶರತ್ ಬೈಲಕೆರೆ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಿಲ್ಪಾ ರವೀಂದ್ರ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮೋಹನ್ ರಾಜ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply