ದೋಣಿ ದುರಂತ- ನಾಲ್ಕು ಸಾವು

ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿ ನಾಲ್ಕು ಮೀನುಗಾರರು ಸಾವನ್ನಪ್ಪಿದ ಘಟನೆ ಕುಂದಾಪುರದ ಕೊಡೇರಿಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ. ಸಾಗರ್ ಶ್ರೀ ಜೋಡಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಶೇಖರ, ನಾಗ, ಲಕ್ಷ್ಮಣ, ಮಂಜುನಾಥ ಮೃತ ದುರ್ದೈವಿಗಳು.

ದೋಣಿಯಲ್ಲಿ ಒಟ್ಟು ಹನ್ನೊಂದು ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ.  ಪರಿಣಾಮ ಮೂವರು ಮೀನುಗಾರರು ಸಾವನ್ನಪ್ಪಿದ್ದಾರೆ ಓರ್ವ ನಾಪತ್ತೆಯಾಗಿದ್ದು ಉಳಿದವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ನಾಪತ್ತೆಯಾದ ಮೀನುಗಾರನ ಪತ್ತೆ ಕಾರ್ಯ ಮುಂದುವರೆದಿದೆ.

Leave a Reply