ಪೋನ್ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ

ಬೆಂಗಳೂರು : ನಿಮ್ಮ ಪೋನ್ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ. ನಿಮ್ಮ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವ ಕುಮಾರ್ ಪೋನ್ ಕದ್ದಾಲಿಕೆ ಆರೋಪಕ್ಕೆ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿ ರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಶ್ರೀ ಡಿಕೆ ಶಿವಕುಮಾರ್‌ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರ ವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಮಾಡಿದ್ದು ಅದು ನೆನಪಿದೆಯಾ ? ಎಂಬುದಾಗಿ ಪ್ರಶ್ನಿಸಿದ್ದಾರೆ.

ಸ್ವಾಮೀಜಿಗಳ ಫೋನ್‌ ಕದ್ದಾಲಿಕೆಯ ಕೇಸ್‌ ಇನ್ನು ಜೀವಂತವಾಗಿದೆ. ನಿಮ್ಮ ಫೋನ್‌ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ ನಿಮ್ಮ ಹೇಳಿಕೆ ಹಾಸ್ಯಾಸ್ಪದ. ಪ್ರತಿ ಮಾತಿನಲ್ಲೂ ಪ್ರಚಾರ ಬಯಸುತ್ತೀರಲ್ಲ.ʼನಾವು ಅಧಿಕಾರದಲ್ಲಿದ್ದಾಗ ಅನೇಕ ಸ್ವಾಮೀಜಿಗಳ ಫೋನ್‌ ಕದ್ದಾಲಿಕೆ ಮಾಡಿದ್ದೆವುʼ ಎಂಬ ಸತ್ಯ ಹೇಳಿಬಿಡಿ ಡಿಕೆಶಿ ಅವರೇ ಎಂಬುದಾಗಿ ಒತ್ತಾಯಿಸಿದ್ದಾರೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply