ಫಿಶ್ ನೆಟ್ ಕಾರ್ಮಿಕರಿಗೆ ಕೊರೊನಾ

ಉಡುಪಿ: ಇಲ್ಲಿಗೆ ಸಮೀಪದ ನಿಟ್ಟೂರಿನ ಮೀನು ಹಿಡಿಯುವ ಬಲೆ ತಯಾರಿಕಾ ಫ್ಯಾಕ್ಟರಿ (ಫಿಶ್ ನೆಟ್)ಯ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಕಳೆದ  ಎರಡು ದಿನದಿಂದ  ಫ್ಯಾಕ್ಟರಿಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ.  ಸಂಸ್ಥೆ ಉದ್ಯೋಗಿಗಳು ಆತಂಕಕ್ಕೊಳಗಾಗಿದ್ದಾರೆ.

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ನೂರಾರು ಕಾರ್ಮಿಕರ ಗಂಟಲ ದ್ರವ ಪರೀಕ್ಷಿಸಲಾಗಿದೆ. ಫ್ಯಾಕ್ಟರಿಯಲ್ಲಿ 4 ಯುನಿಟ್ ಗಳಿದ್ದು, ಸುಮಾರು 1 ಸಾವಿರಕ್ಕೂ ಅಧಿಕ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಹಿರಿಯ ಆರೋಗ್ಯ ಅಧಿಕಾರಿಗಳು ಫ್ಯಾಕ್ಟರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರಿರುವಲ್ಲಿ ಸರಕಾರಿ ನಿಯಮಗಳನ್ನು ಗಾಳಿಗೆ  ತೂರಿ ಕಾರ್ಯಾಚರಿಸುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಅಂಥ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply