ಬೆಂಗಳೂರು ಮೆಟ್ರೋ ಆರಂಭ

ಕೆಲವು ದಿನಗಳ ಹಿಂದೆ ಬಿಡುಗಡೆಯಾದ ಅನ್ ಲಾಕ್-4 ಮಾರ್ಗಸೂಚಿಯಂತೆ ದೇಶಾದ್ಯಂತ ಮೆಟ್ರೊ ಸೇವೆ ಆರಂಭ ವಾಗುತ್ತಿದ್ದು ಬೆಂಗಳೂರಿನ ನಮ್ಮ ಮೆಟ್ರೊ ರೈಲು ಸಂಚಾರಕ್ಕೆ ವ್ಯವಸ್ಥೆಗಳನ್ನು ಮಾಡಲಾಗಿದೆ.

ಈಗಾಗಲೇ ಪ್ರಾಯೋಗಿಕವಾಗಿ ಮೆಟ್ರೊ ರೈಲು ಸಂಚಾರ ಆರಂಭವಾಗಿದ್ದು ಇಂದು ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ರೈಲು ಸಂಚರಿಸಲಿದೆ. ಬೆಳಿಗ್ಗೆ 8ರಿಂದ 11ರ ತನಕ ಮತ್ತು ಸಂಜೆ 4.30 ರಿಂದ ರಾತ್ರಿ 7.30ರ ವರೆಗೆ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸೆಪ್ಟೆಂಬರ್ 11 ರಿಂದ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಬೆಳಿಗ್ಗೆ 7ರಿಂದ ರಾತ್ರಿ 9ರ ತನಕ ರೈಲು ಸಂಚರಿಸಲಿದೆ ಎಂದು ಮೆಟ್ರೊ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply