Janardhan Kodavoor/ Team KaravaliXpress
26.6 C
Udupi
Saturday, June 12, 2021

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ

ಉಡುಪಿ: ಉಡುಪಿ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ 115 ಮಿ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಸಾರ್ವಜನಿಕರು ಎಚ್ಚರವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ಸಾರ್ವಜನಿಕರು ನದಿ, ಸಮುದ್ರಗಳಿಗೆ ಇಳಿಯಬಾರದು ಎಂದು ಪ್ರಾಧಿಕಾರ ಎಚ್ಚರಿಕೆ ನೀಡಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!