ವಿಮಾನ ದುರಂತ ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ

ಕೋಯಿಕೋಡ್: ಕೇರಳ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ನೀಡುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಟಿಸಿದ್ದಾರೆ.

ಇಂದು ಸ್ಥಳಕ್ಕೆ ಭೇಟಿ ನೀಡಿದ ಅವರು, ವಿಮಾನದ ಡಿಜಿಟಲ್ ಫ್ಲೈಟ್ ಡಾಟಾ ರೆಕಾರ್ಡರ್ ಮತ್ತು ಕಾಕ್ಪಿಟ್ ವಾಯ್ಸ್ ರೆಕಾರ್ಡರ್ ಪಡೆಯಲಾಗಿದ್ದು, ಎಎಐಬಿ ತನಿಖೆ ನಡೆಸುತ್ತಿದೆ ಎಂದರು.

ಮೃತ ವ್ಯಕ್ತಿಯ ಪ್ರತೀ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಂಭೀರ ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ . ಪರಿಹಾರ ಘೋಷಿಸಿದರು.

ವಿಮಾನದಲ್ಲಿ 190 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 149 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ 23 ಮಂದಿ ಆಸ್ಪತ್ರೆಯಿಂದ ಬಿಡುಗಡಎಗೊಂಡಿದ್ದಾರೆ .

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply