Janardhan Kodavoor/ Team KaravaliXpress
26 C
Udupi
Monday, May 17, 2021

ಶಿವಮೊಗ್ಗದಲ್ಲಿ 4 ಲಕ್ಷ ಮಂದಿಗೆ ಆಯುರ್ವೇದ ಕಿಟ್ ವಿತರಣೆ

ಶಿವಮೊಗ್ಗ: ದೇಶದಲ್ಲೇ ಮೊದಲ ಪ್ರಯತ್ನವಾಗಿ ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಜನರಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ 4 ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ವಿತರಣೆಗೆ ಬುಧವಾರ ಚಾಲನೆ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿ, ಪುತ್ತೂರು ಮೂಲದ ಬೆಂಗಳೂರಿನ ಡಾ. ಗಿರಿಧರ ಕಜೆ ಮಾರ್ಗದರ್ಶನದಲ್ಲಿ ಕಿಟ್ ಸಿದ್ಧಪಡಿಸಲಾಗಿದೆ. ಮೊದಲ ಹಂತದಲ್ಲಿ 1 ಲಕ್ಷ ಕಿಟ್  ವಿತರಣೆಗೆ ಸಿದ್ಧವಾಗಿದೆ. ಮುಂದೆ ಎರಡು ಹಂತಗಳಲ್ಲಿ ಶಿವಮೊಗ್ಗ ನಗರದ ಪ್ರತಿಯೊಬ್ಬರಿಗೂ ಕಿಟ್ ಹಂಚಲಾಗುವುದು. ಅದಕ್ಕಾಗಿ ವಾರ್ಡುವಾರು ಸಿದ್ಧತೆ ಮಾಡಲಾಗಿದೆ ಎಂದರು.

ಶಿವಮೊಗ್ಗದಲ್ಲಿ 4 ಲಕ್ಷ ಮಂದಿಗೆ ಆಯುರ್ವೇದ ಕಿಟ್ ವಿತರಣೆ

ಕೊರೋನಾ ಸೋಂಕಿಗೆ ಡಾ. ಕಜೆ ಸಿದ್ಧಪಡಿಸಿದ ಆಯುರ್ವೇದ ಔಷಧವನ್ನು ಸರ್ಕಾರದ ಹಂತದಲ್ಲಿ ಆದಷ್ಟು ಶೀಘ್ರ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅನುಮತಿ ನಿರೀಕ್ಷಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಆಯುರ್ವೇದ ದಿವ್ಯೌಷಧಿಯಾಗಿದೆ. ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಪೂರಕವಾಗಿ ಸ್ಪಂದಿಸುವ ಅಗತ್ಯವಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ. ಗಿರಿಧರ ಕಜೆ, ಜನರು ಕೊರೊನಾಕ್ಕೆ ಗಾಬರಿ ಪಡಬೇಕಾಗಿಲ್ಲ. ಆದರೆ, ರೋಗ ಕಡೆಗಣಿಸದೆ ಸರ್ಕಾರದ ಮಾರ್ಗಸೂಚಿ ಪಾಲಿಸಿಕೊಂಡು, ಮನೆ ಮದ್ದಿನ ಮೂಲಕ ನಿಯಂತ್ರಿಸಬಹುದು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡರೆ ಅದಕ್ಕೆ ಭಯಪಡುವ ಅಗತ್ಯವಿಲ್ಲ ಎಂದರು.

ಶಾಸಕರಾದ ಆಯನೂರು ಮಂಜುನಾಥ ಮತ್ತು ಆರ್. ಪ್ರಸನ್ನ ಕುಮಾರ್, ಆರ್ಯ ವೈಶ್ಯ ನಿಗಮದ ಡಿ. ಎಸ್. ಅರುಣ್, ಎಂಎಡಿಬಿ ಅಧ್ಯಕ್ಷ ಕೆ. ಎಸ್. ಗುರುಮೂರ್ತಿ, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ, ಆರ್ ಎಸ್ ಎಸ್ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್ ಮೊದಲಾದವರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...
error: Content is protected !!