ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರಕಾರ ಅನುಮತಿ : ಯಶ್‍ಪಾಲ್ ಸುವರ್ಣ ಸ್ವಾಗತ.

ಉಡುಪಿ: ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಬಗ್ಗೆ ಹೊಸ ಮಾರ್ಗಸೂಚಿಯ ಮೂಲಕ ಸರಳವಾಗಿ ನಡೆಸಲು ಅನುಮತಿಯನ್ನು ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್. ಯಡಿಯೂರಪ್ಪರವರ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ರಾಜ್ಯದ ಅಸಂಖ್ಯ ಭಕ್ತರ ಭಾವನೆಗಳಿಗೆ ಸ್ಪಂದಿಸಿ ಕೋವಿಡ್ ಭೀತಿಯ ನಡುವೆಯೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಿ ಅವಕಾಶ ಕಲ್ಪಿಸಿದ ರಾಜ್ಯ ಸರಕಾರ ಹಾಗೂ ಸಹಕರಿಸಿದ ಎಲ್ಲಾ ಸಚಿವರು, ಶಾಸಕರಿಗೆ ಹಾಗೂ ಸಂಸದರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Leave a Reply