ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 9 ದಿನಗಳಲ್ಲೇ ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಸಿಎಂ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಬಂದ ವರದಿಯಲ್ಲಿ ನೆಗೆಟಿವ್ ದೃಢಪಟ್ಟಿತ್ತು. ಹಾಗಾಗಿ ಆಸ್ಪತ್ರೆ ವೈದ್ಯರ ಬಳಿ ಸಮಾಲೋಚನೆ ನಡೆಸಿ ಇಂದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಲು ತೀರ್ಮಾನಿಸಿದ್ದರು.

ಅದರಂತೆ ಇದೀಗ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದು, ಮನೆಯಲ್ಲಿಯೇ ಕೆಲವು ದಿನಗಳ ಕಾಲ ಹೋಮ್ ಕ್ವಾರಂಟೈನ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

 
 
 
 
 
 
 
 
 
 
 

Leave a Reply