ಆದಾಯ ತೆರಿಗೆ ಆಯುಕ್ತರ ಕಚೇರಿ ಮಂಗಳೂರಿನಲ್ಲೇ ಕಾರ್ಯಚರಣೆ~ಯಶ್ಪಾಲ್ ಸುವರ್ಣ ಸ್ವಾಗತ

ಉಡುಪಿ: ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯನ್ನು ಮಂಗಳೂರಿನಲ್ಲೇ ಉಳಿಸಿಕೊಳ್ಳಲು ಸಮ್ಮತಿ ಸಿದ ಕೇಂದ್ರ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯ 4 ಲಕ್ಷ ಮಂದಿ ಆದಾಯ ತೆರಿಗೆ ಪಾವತಿದಾರರ ಒಕ್ಕೊರಲ ಮನವಿಗೆ ಸ್ಪಂದಿಸಿ, ರಾಜ್ಯದಲ್ಲಿಯೇ ಎರಡನೇ ಅತೀ ಹೆಚ್ಚು ಆದಾಯ ತೆರಿಗೆ ಸಂಗ್ರಹಿಸುವ ಕಚೇರಿಯಾಗಿ ಗುರುತಿಸಿಕೊಂಡಿರುವ ಈ ಕಚೇರಿಯನ್ನು ದಕ್ಷಿಣ ಭಾರತದ ಪ್ರತಿಷ್ಟಿತ ವಾಣಿಜ್ಯ ನಗರಗಳಲ್ಲಿ ಒಂದಾದ ಬ್ಯಾಂಕಿಂಗ್, ಶಿಕ್ಷಣ, ಪ್ರವಾಸೋದ್ಯಮ, ಕೈಗಾರಿಕೆ, ಮತ್ಸ್ಯೋದ್ಯಮದ ಮೂಲಕ ದೇಶದ ಆರ್ಥಿಕತೆಗೆ ಅಪಾರ ಕೊಡುಗೆ ನೀಡುತ್ತಿರುವ ಮಂಗಳೂರಿನಲ್ಲೇ ಮುಂದುವರಿಸಲು ನಿರ್ಧರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 
 
 
 
 
 
 
 
 
 
 

Leave a Reply