ಆರೋಗ್ಯ ಸಚಿವರಿಗೂ ಕೊರೊನಾ ದೃಢ

ಬೆಂಗಳೂರು: ರಾಜ್ಯ ಆರೋಗ್ಯ ಮಂತ್ರಿ ಬಿ. ಶ್ರೀರಾಮುಲು ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಸ್ವತಃ ಶ್ರೀರಾಮುಲು ಅವರೇ ಈ ಮಾಹಿತಿಯನ್ನು ತನ್ನ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

ಆದಷ್ಟು ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈಚೆಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ  ಕೋರುತ್ತೇನೆ ಎಂದು ಸಚಿವ ರಾಮುಲು ಟ್ವೀಟ್ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply