ಉಡುಪಿಯಲ್ಲಿಂದು 11 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ : 11 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ನ.23: ಜಿಲ್ಲೆಯಲ್ಲಿ ಸೋಮವಾರ 11 ಮಂದಿಯಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ 28 ಮಂದಿ ಚಿಕಿತ್ಸೆ ಯಿಂದ ಗುಣಮುಖರಾದರೆ, ಸದ್ಯ ಜಿಲ್ಲೆ ಯಲ್ಲಿ 181 ಮಂದಿ ಕೊರೋನ ಪಾಸಿಟಿವ್‌ಗೆ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 6 ಮಂದಿ ಪುರುಷರು ಹಾಗೂ 5 ಮಂದಿ ಮಹಿಳೆ ಯರು. ಇವರಲ್ಲಿ ನಾಲ್ವರು ಪುರುಷರು ಹಾಗೂ ಮೂವರು ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 5, ಕುಂದಾಪುರ ತಾಲೂಕಿನ 4, ಕಾರ್ಕಳ ತಾಲೂಕಿನ ಇಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ವಿವರಿಸಿದರು.

28 ಮಂದಿ ಗುಣಮುಖ: ರವಿವಾರ 28 ಮಂದಿ ಚಿಕಿತ್ಸೆ ಬಳಿಕ ಸೋಂಕಿ ನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಸೋಂಕಿ ನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,155 ಆಗಿದೆ. ಜಿಲ್ಲೆಯಲ್ಲಿ ಸದ್ಯ 181 ಮಂದಿ ಈಗಲೂ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

 
 
 
 
 
 
 
 
 
 
 

Leave a Reply