ಕೊರೊನಾ ಶೀಘ್ರ ನಿರ್ಧಾರಕ್ಕೆ ತಂತ್ರಜ್ಞಾನ ಆಧರಿತ ಕೇಂದ್ರೀಕೃತ ವ್ಯವಸ್ಥೆ

ಬೆಂಗಳೂರು :ಕೊರೊನಾ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೇ, ಮನೆ ಆರೈಕೆಗೊಳಪಡಬೇಕೇ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೇ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವ ತಂತ್ರಜ್ಞಾನ ಆಧರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ .ಕೆ. ಸುಧಾಕರ್ ತಿಳಿಸಿದ್ದಾರೆ. 

ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವೀಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಗೆ ಸಂಬಂಧಿಸಿದಂತೆ ಸರ್ಕಾರ ಬಳಸುತ್ತಿರುವ ಎಲ್ಲ ಆ್ಯಪ್, ತಂತ್ರಜ್ಞಾನಗಳನ್ನು ಒಟ್ಟು ಸೇರಿಸಿ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸು ವುದರಿಂದ ಕೋವಿಡ್ ರೋಗಿಯು ಎಲ್ಲಿ ದಾಖಲಾಗಬೇಕು ಅಥವಾ ಯಾವ ರೀತಿಯ ಚಿಕಿತ್ಸೆಗೆ ಒಳಪಡಬೇಕು ಎಂದು ತಕ್ಷಣ ತೀರ್ಮಾನಿಸಬಹುದು. ಅದರಿಂದಾಗಿ ಚಿಕಿತ್ಸೆ ಪಡೆಯುವಲ್ಲಿನ ಗೊಂದಲ ನಿವಾರಣೆಯಾಗಲಿದೆ ಎಂದು ಸಚಿವ ಸುಧಾಕರ್ ಹೇಳಿದರು.

 
 
 
 
 
 
 
 
 

Leave a Reply