ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಮೂಲ್ಕಿ ಜಯ ಸಿ. ಸುವರ್ಣ ನಿಧನ

ಉಡುಪಿ: ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮೂಲ್ಕಿ ಜಯ ಸಿ. ಸುವರ್ಣ ರವರು ಬುಧವಾರ ನಿಧನರಾಗಿದ್ದಾರೆ.ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ, ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿದ್ದ ಇವರು ತಮ್ಮ 75ನೇ ವಯಸ್ಸಿನಲ್ಲಿ ಮುಂಬೈಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಜಯ ಸಿ.ಸುವರ್ಣ ಅವರು ಮುಂಬೈಯಲ್ಲಿ ಹೊಟೇಲ್ ಉದ್ಯಮಿ ಯಾಗಿದ್ದು, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರ ಉತ್ತಮ ಭಾಂದವ್ಯ ಹೊಂದಿದ್ದು‌, ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಸಂಬಂಧ ಹೊಂದಿದಂತಹ ಕೊಡುಗೈ ದಾನಿಯಾಗಿದ್ದರು.

ಇವರು ಪತ್ನಿ ಲೀಲಾವತಿ ಜಯ ಸುವರ್ಣ, ಮಕ್ಕಳಾದ ಸೂರ್ಯಕಾಂತ್, ಸುಭಾಶ್ ಜೆ. ದಿನೇಶ್ ಕೆ. ಸುವರ್ಣ, ಯೋಗೇಶ್ ಜೆ. ಸುವರ್ಣರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈಯಲ್ಲಿ ನಡೆಯಲಿದೆ ಎಂಬ ಮಾಹಿತಿ ಇದೆ.

 
 
 
 
 
 
 
 
 
 
 

Leave a Reply