ಸರಕಾರದ ಸಾಧನೆ ಕಾರ್ಯಕ್ರಮ ವೀಕ್ಷಣೆ

ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಸರ್ಕಾರದ ಒಂದು ವರ್ಷದ ಸಾಧನೆಗಳ ಮಾಹಿತಿಗಳನ್ನೊಳಗೊಂಡ ಕಿರುಹೊತ್ತಿಗೆ `ಸವಾಲುಗಳ ಒಂದು ವರ್ಷ- ಪರಿಹಾರದ ಸ್ಪರ್ಷ’ ವನ್ನು ಉಡುಪಿ ಶಾಸಕ ರಘುಪತಿ ಭಟ್ ಹಾಗೂ `ಜನಪದ’ ವಿಶೇಷ ಸಂಚಿಕೆಯನ್ನು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮತ್ತು `ಮಾರ್ಚ್ ಆಫ್ ಕನರ್ಾಟಕ’ ವಿಶೇಷ ಸಂಚಿಕೆಯನ್ನು ಜಿ. ಪಂ. ಅಧ್ಯಕ್ಷ ದಿನಕರಬಾಬು ಅನಾವರಣಗೊಳಿಸಿದರು.

ಮುಖ್ಯಮಂತ್ರಿಗಳ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ಉಡುಪಿ ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಗಳ ನೆರವು ಪಡೆದ ಫಲಾನುಭವಿಗಳು ಇದ್ದರು. ಈ ಸಂದರ್ಭದಲ್ಲಿ ಕೋವಿಡ್ 19ನಿಂದ ಗುಣಮುಖರಾದವರನ್ನು ಗೌರವಿಸಲಾಯಿತು. ಉಡುಪಿ ಡಯಟ್ ನ ಹಿರಿಯ ಉಪನ್ಯಾಸಕ ಅಶೋಕ್ ಕಾಮತ್ ಸ್ವಾಗತಿಸಿ, ನಿರೂಪಿಸಿದರು.

 

 
 
 
 
 
 
 
 
 
 
 

Leave a Reply