ಕೆಎಎಸ್ ಅಧಿಕಾರಿ ಡಾ. ಬಿ. ಸುಧಾಗೆ ಎಸಿಬಿ ಶಾಕ್ 

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪ​ದಡಿ ​ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ​ಏಕಕಾಲದಲ್ಲಿ ​ದಾಳಿ ನಡೆಸಿದ್ದಾರೆ.

ಸುಧಾ ಹೆಸರಿನಲ್ಲಿ ಕೋಟ್ಯಂತರ ಆಸ್ತಿ​. ​ಬೆಂಗಳೂರಿನ ಕೆಲವಡೆ ಫ್ಲೈಟ್ ಗಳಿರುವು​​ದು ಪತ್ತೆ​. ಸಂಬಂಧಿಕರ ಹೆಸರಲ್ಲಿ ಆಸ್ತಿ​. ​ ಮನೆಯಲ್ಲಿ  ಕೆಜಿಗಟ್ಟಲೆ ಚಿನ್ನ​. ಚಿನ್ನದ ರಾಶಿಯನ್ನು ಕಂ​ಡು  ಎಸಿಬಿ ಅಧಿಕಾರಿಗ​ಳೆ ಶಾಕ್ .  

ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ದಾಳಿ ನಡೆಸಲಾಗಿದೆ . ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿ ಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಕುರಿತು ದೂರು ದಾಖಲಾಗಿತ್ತು​. ​ ಪ್ರಸ್ತುತ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ  ಆಡಳಿತ ಅಧಿಕಾರಿ ಆಗಿರುವ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆ​ಸಿದೆ. ಬೆಂಗಳೂರಿನ  ಯಲಹಂಕದಲ್ಲಿ ಒಂದು ಫ್ಲ್ಯಾಟ್,  ಕೊಡಿಗೇಹಳ್ಳಿ ನಿವಾಸ, ಬ್ಯಾಟರಾಯನಪುರ ಹಾಗೂ ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಮನೆಯ ಮೇಲೂ ದಾಳಿ  ನಡೆಸಲಾಗಿದೆ ಎಂದೂ ವರದಿಯಾಗಿದೆ.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ​​ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ  ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ಉಡುಪಿಯಲ್ಲಿರುವ ಡಾ. ಸುಧಾ​ ​ಅವರ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿಗಳನ್ನು ಪರಿಶೀಲ​​ನೆ  ಮಾಡುತ್ತಿದ್ದಾರೆ.

​ಎಸಿಬಿ ಗೆ ಎರಡು ಬಾರಿ ದೂರು ನೀಡಿದರು ಸರಿಯಾಗಿ ಸ್ಪಂದಿಸದ ಕಾರಣ ನ್ಯಾಯಾಲಯದ ಮೂಲಕ ಆದೇಶ ಬಂದ ಹಿನ್ನಲೆಯಲ್ಲಿ ಇಂದು ಎಸಿಬಿ ಕಾರ್ಯಾಚರಣೆ ನಡೆಸಿದೆ.  
ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ  
 
 
 
 
 
 
 
 
 
 
 

Leave a Reply