ಹಾಸನದಲ್ಲಿ ಭೀಕರ ಅಪಘಾತ; 9 ಮಂದಿ ಸಾವು!

ಅರಸೀಕೆರೆ ತಾಲೂಕು ಗಾಂಧಿನಗರ ಗ್ರಾಮದ ಸಮೀಪ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸಾರಿಗೆ ಬಸ್, ಟೆಂಪೋ ಟ್ರಾವೆಲರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ.

ಮೃತರನ್ನು ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಎಂದು ಗುರುತಿಸಲಾಗಿದೆ.

ಕೆಎಸ್ಆರ್ಟಿಸಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್ನಲ್ಲಿದ್ದ 4 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ.

ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ದೇವರ ಪಡೆದು ಅಲ್ಲಿಂದ ವಾಪಸ್ ಆಗುತ್ತಿದ್ದ ವೇಳೆ ಘಟನೆ ನಡೆದಿದೆ ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನ ಜಿಲ್ಲೆಯಲ್ಲಿ ನಡೆದಿರುವ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದಿದ್ದಾರೆ.

 
 
 
 
 
 
 
 
 
 
 

Leave a Reply