ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ದುರ್ಮರಣ!

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ನಾಗಮಂಗಲ ತಾಲೂಕಿನ ನಾಗತೀಹಳ್ಳಿಯಲ್ಲಿ ನಡೆದಿದೆ.

ಸ್ವಿಫ್ಟ್ ಹಾಗೂ ಇನ್ನೋವಾ ಕಾರುಗಳ ನಡುವೆ ಇಂದು ರಾತ್ರಿ ಭೀಕರವಾದ ಅಪಘಾತ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರೆಲ್ಲರೂ ತಮಿಳುನಾಡು ಮೂಲದವರು ಎನ್ನಲಾಗಿದೆ.

ಬೆಂಗಳೂರಿನಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಜಕ ಕ್ರಾಸ್ ಆಗಿ ಹಾಸನದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

 
 
 
 
 
 
 
 
 

Leave a Reply