ಟ್ಯಾಂಕರ್-ಬೈಕ್ ನಡುವೆ ಭೀಕರ ಅಪಘಾತ; ಸವಾರ ಸಾವು

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.

ಚೆಕ್ ಪೋಸ್ಟ್ ಬಳಿ ಇಂದು (ಫೆ.2) ರಂದು ಮಧ್ಯಾಹ್ನ ಟ್ಯಾಂಕರ್ ಮತ್ತು ಬೈಕ್ ನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ. ಸಹ ಸವಾರೆ ಗಾಯಗೊಂಡಿದ್ದು ಕಾರ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕರಾವಳಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಹೊರನಾಡು ದೇವಸ್ಥಾನಕ್ಕೆ ಹೋಗಿ ಹಿಂದಿರುಗುವ ವೇಳೆ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply