ಕಾಪು: ಬೈಕ್‌-ಟ್ಯಾಂಕರ್ ನಡುವೆ ಭೀಕರ ಅಪಘಾತ; ಇಬ್ಬರು ಸಾವು!

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ವೆಸ್ಟ್ ಕೋಸ್ಟ್  ನರ್ಸರಿ ಮುಂಭಾಗ ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮತ್ತು ಸಹ ಸವಾರ ಮೃತಪಟ್ಟ ಘಟನೆ ಶನಿವಾರ ಸಂಜೆ ವರದಿಯಾಗಿದೆ.

ಪಲಿಮಾರು ಅವರಾಲು ಮಟ್ಟು ನಿವಾಸಿಗಳಾದ ಸುಬ್ರಹ್ಮಣ್ಯ(30) ಮತ್ತು ಗಿರೀಶ್ (26) ಮೃತಪಟ್ಟವರು.

ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ದಾರುಣವಾಗಿ ವೃತ್ತಪಟ್ಟಿದ್ದರೆ, ಮತ್ತೋರ್ವ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply