ಭೀಕರ ಅಪಘಾತ; ಯುವತಿ ಸ್ಥಿತಿ ಗಂಭೀರ

ಮಂಗಳೂರು: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ. ಗಾಯಗೊಂಡ ಯುವತಿಯನ್ನು ಪುತ್ತೂರಿನ ಕೆದಿಲ ನಿವಾಸಿ ವಾಣಿಶ್ರೀ ಭಟ್ (22) ಎಂದು ಗುರುತಿಸಲಾಗಿದೆ.

 

ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಸ್ಥಿತಿ ಗಂಭೀರವಾಗಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply