ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಆಧಾರ್ ತಿದ್ದುಪಡಿ ಕೇಂದ್ರ ಸ್ಥಾಪನೆ

ಬೆಂಗಳೂರು : ಗ್ರಾಮೀಣ ಜನರು ಆಧಾರ್ ತಿದ್ದುಪಡಿ ಅಥವಾ ನೋಂದಣಿಗಾಗಿ ಹೋಬಳಿ, ತಾಲೂಕು ಕೇಂದ್ರಕ್ಕೆ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಪಂಚಾಯತ್‌ಗಳಲ್ಲೇ ಆಧಾರ್ ತಿದ್ದುಪಡಿ ಮತ್ತು ನೋಂದಣಿ ಕೇಂದ್ರ ಆರಂಭಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮುಂದಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯನ್ನು ಹೊರತುಪಡಿಸಿ ಮೊದಲ ಹಂತದಲ್ಲಿ 630 ಗ್ರಾ.ಪಂ.ಗಳಲ್ಲಿ ತಿದ್ದುಪಡಿ ಕೇಂದ್ರ ತೆರೆಯಲು ಸಿದ್ಧತೆ ನಡೆದಿದೆ.ಪ್ರತಿ ಜಿಲ್ಲಾ ಪಂಚಾಯತ್‌ನ 22 ಗ್ರಾ.ಪಂ.ಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಆರಂಭಿಸುತ್ತಿರುವುದರಿಂದ ಜು.14ರೊಳಗೆ ಒಬ್ಬ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿ.ಪಂ. ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಐದು ವರ್ಷದೊಳಗಿನ ಮಕ್ಕಳಿಗೆ ಆಧಾರ್ ನೋಂದಣಿ ಕೂಡ ಗ್ರಾ.ಪಂ.ಗಳಲ್ಲಿ ಮಾಡಿಸಬಹುದಾಗಿದೆ. ನೋಂದಣಿಗೆ ಯಾವುದೇ ಶುಲ್ಕ ಪಡೆಯಬಾರದು. UIDAI ನಿಗದಿಪಡಿಸಿದ 50 ರೂ. ಹಣವನ್ನು ಇಲಾಖೆಯಿಂದ ಸಂಬಂಧಿಸಿದ ಗ್ರಾ.ಪಂ.ಗಳಿಗೆ ವರ್ಗಾಹಿಸಲಾಗುವುದು ಎಂದು ಕೂಡ ತಿಳಿಸಲಾಗಿದೆ.

 

 
 
 
 
 
 
 
 
 
 
 

Leave a Reply