ಆದರ್ಶ ಆಸ್ಪತ್ರೆ~ ವಿಶ್ವ ಡಯಾಬಿಟೀಸ್ ದಿನಾಚರಣೆ

ಆದರ್ಶ ಆಸ್ಪತ್ರೆ, ಉಡುಪಿ ಮತ್ತು ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ) ಇವರ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ದಿನಾಂಕ: 14.11.2021ರ ಭಾನುವಾರ ಬೆಳಿಗ್ಗೆ 8.00ರಿಂದ ಮಧ್ಯಾಹ್ನ 2.00ರ ವರೆಗೆ. ಸಾರ್ವಜನಿಕರಿಗೆ, ಉಡುಪಿ ತಾಲೂಕು ಗ್ರಾಮ ಪಂಚಾಯತ್ ಸದಸ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
 
ಈ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಸನ್ಮಾನ್ಯ ಶ್ರೀ ಸುನೀಲ್ ಕುಮಾರ್. ವಿ. ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಬೆಳಿಗ್ಗೆ 9.00 ಕ್ಕೆ ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಈ ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಘುಪತಿ ಭಟ್, ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್ ಹಾಗೂ ಉದ್ಯಮಿ ಗಳಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರು ಉಪಸ್ಥಿತರಿರುವರು.
 
ಶಿಬಿರದಲ್ಲಿ ಆಸ್ಪತ್ರೆಯ ವೈದ್ಯಕೀಯ ತಜ್ಞ ವೈದ್ಯರುಗಳಾದ ಡಾ| ಜಿ.ಎಸ್.ಚಂದ್ರಶೇಖರ್, ಡಾ| ಉದಯ ಕುಮಾರ ಪ್ರಭು, ಡಾ| ಸುದೀಪ್ ಶೆಟ್ಟಿ, ಡಾ| ಸುಹಾಸ್ ಜಿ.ಸಿ, ಹಾಗೂ ಹೃದ್ರೋಗ ತಜ್ಞರಾದ ಡಾ| ಶ್ರೀಕಾಂತ್ ಕೃಷ್ಣ ಮತ್ತು ಡಾ| ವಿಶು ಕುಮಾರ. ಬಿ. ರವರು ಭಾಗವಹಿಸಲಿರುವರು. ಶಿಬಿರದಲ್ಲಿ ಭಾಗವಹಿಸುವ ಎಲ್ಲರಿಗೂ ತಜ್ಞವೈದ್ಯರಿಂದ ಆರೋಗ್ಯ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ರಕ್ತದ ಸಕ್ಕರೆ ಅಂಶ, ರಕ್ತದ ಕೊಬ್ಬಿನಾಂಶ ಹಾಗೂ ಇ.ಸಿ.ಜಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. 
ವೈದ್ಯರ ಪರೀಕ್ಷೆಯ ಸಮಯದಲ್ಲಿ ಅಗತ್ಯವೆಂದು ಕಂಡುಬರುವ ರೋಗಿಗಳಿಗೆ ಹೃದಯದ ಸ್ಕ್ಯಾನಿಂಗ್ (ಇಕೋ) ಹಾಗೂ ಟಿ.ಎಂ.ಟಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ಅಲ್ಲದೆ ಹೆಚ್ಚಿನ ಪರೀಕ್ಷೆ ಹಾಗೂ ಚಿಕಿತ್ಸೆ ಅಗತ್ಯವಿದ್ದಲ್ಲಿ ರಿಯಾಯಿತಿ ದರದಲ್ಲಿ ಮಾಡಲಾಗುವುದು.
 
ಸಾರ್ವಜನಿಕರು, ಉಡುಪಿ ತಾಲೂಕು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಜಿ.ಎಸ್. ಚಂದ್ರಶೇಖರ್ ರವರು ತಿಳಿಸಿರುತ್ತಾರೆ.
  
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯರುಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಉಚಿತ ಆರೋಗ್ಯ ತಪಾಸಣಾ ಕಾರ್ಡ್ನ್ನು ಬಿಡುಗಡೆ ಮಾಡಲಾಗುವುದು. ಈ ಕಾರ್ಡ್ ಪಡೆದವರು 2021ರ ಡಿಸೆಂಬರ್ 31ರ ವರೆಗೆ ಉಚಿತ ಆರೋಗ್ಯ ತಪಾಸಣೆ ಮಾಡಬಹುದು.
 
 
 
 
 
 
 
 
 
 
 

Leave a Reply