ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ (ರಿ.), ಮಲ್ಪೆ ಬೀಚ್ ವಿಂಚ್ ಪ್ಯಾರಾಸೈಲಿಂಗ್ ಬೋಟ್ ವರ್ಷಾಚರಣೆ ಸಂಭ್ರಮ

ಮಲ್ಪೆ ಬೀಚ್ ನಲ್ಲಿ ಇಂದು ದಿನಾಂಕ 03-12-2022 ರಂದು ನಡೆದ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ (ರಿ.), ಮಲ್ಪೆ ಬೀಚ್ ವಿಂಚ್ ಪ್ಯಾರಾಸೈಲಿಂಗ್ ಬೋಟ್ ವರ್ಷಾಚರಣೆ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ 2ನೇ ವಿಂಚ್ ಪ್ಯಾರಸೈಲಿಂಗ್ ಬೋಟ್ ನ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಪ್ರವರ್ತಕರಾದ ನಾಡೋಜ ಡಾll. ಜಿ ಶಂಕರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪಾಂಡುರಂಗ ಮಲ್ಪೆ, ನಗರಸಭಾ ಸದಸ್ಯರುಗಳಾದ ಎಡ್ಲಿನ್ ಕರ್ಕಡ, ವಿಜಯ್ ಕೊಡವೂರು, ಸುಂದರ್ ಜೆ ಕಲ್ಮಾಡಿ, ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್, ಹಿಂದೂ ಯುವ ಸೇನೆಯ ಜಿಲ್ಲಾಧ್ಯಕ್ಷರಾದ ಮಂಜು ಕೊಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply