ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶೀಘ್ರವೇ ನಾಮಕರಣ ಎಂದ ನಳಿನ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಮತ್ತು ಕನ್ಯಾಡಿ ಶ್ರೀಗಳೊಂದಿಗೆ ಚರ್ಚಿಸಿ “ಕೋಟಿ ಚೆನ್ನಯರ” ಹೆಸರಿಡಲು ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮವನ್ನು ಜರುಗಿಸಲಾಗುವುದು ಎಂದು ಸಂಸತ್ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಮಾಹಿತಿ ನೀಡಿದ್ದಾರೆ.

ಕೋಟಿ ಚೆನ್ನಯರ ಹೆಸರು ಮಾತ್ರವಲ್ಲದೆ ಬೇರೆ ಬೇರೆ ಹೆಸರುಗಳನ್ನು ಇಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾಮಕರಣ ಪ್ರಕ್ರಿಯೆಯಲ್ಲಿ ಕಾನೂನು ಒಂದೆಡೆಯಾದರೆ ಮತ್ತೊಂದೆಡೆ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಕೂಡಾ ಅಷ್ಟೇ ಮುಖ್ಯವಾಗಿದ್ದು ಇವೆರಡನ್ನು ಗಮನದಲ್ಲಿರಿಸಿ ಕ್ರಮ ಜರುಗಿಸಲಾಗುವುದು ಎಂದು ನಳಿನ್‌ ಕುಮಾರ್ ತಿಳಿಸಿದ್ದಾರೆ.

ಇತ್ತೀಚಿಗೆ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಂಗಳೂರು ವಿಮಾನ ನಿಲ್ದಾಣಕ್ಕೆ  “ಮಧ್ವ ಶಂಕರ” ಎಂಬ ಹೆಸರನ್ನಿಡಲು ಒತ್ತಾಯಿಸಿದನ್ನು ಕೈ ಬಿಟ್ಟಂತೆ​ ಕಾಣುತ್ತಿದೆ. ​

ಈಗಾಗಲೇ ಕನ್ಯಾಡಿ ಕ್ಷೇತ್ರದ ಪೀಠಾಧಿಪತಿಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಂಕನಾಡಿ ಗರೋಡಿಯ ಅಧ್ಯಕ್ಷ ಚಿತ್ತರಂಜನ್ ನೇತೃತ್ವದ ನಿಯೋಗವೊಂದು ಮಂಗಳೂರಿನ ಸರ್ಕಿಟ್‌ಹೌಸ್‌ನಲ್ಲಿ ಸಂಸತ್ ಸದಸ್ಯರನ್ನು ಭೇಟಿ ಮಾಡಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಆಗ್ರಹಿಸಿತ್ತು. ಸದ್ಯ ವಿಮಾನ ನಿಲ್ದಾಣಕ್ಕೆ ಏನು ಹೆಸರಿಡುತ್ತಾರೆ ಎಂದು ಕಾದು ನೋಡಬೇಕಾಗಿದೆ.

 
 
 
 
 
 
 
 
 
 
 

Leave a Reply