ವಿದ್ಯಾಪೋಷಕ್ ಸನಿವಾಸ ಶಿಬಿರದ ಸಮಾರೋಪ ಸಮಾರಂಭ

ಉಡುಪಿ : ಯಕ್ಷಗಾನ ಕಲಾರಂಗ ಪ್ರಥಮ ಪಿ.ಯು.ಸಿ ಮುಗಿಸಿದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ನಡೆಸಿದ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭ ಇಂದು (20-04-2022) ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಜರಗಿತು. ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳರು ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಮಣಿಪಾಲ ಎಂ.ಐ.ಟಿಯ ಪ್ರಾಧ್ಯಾಪಕರಾದ ಡಾ. ನಾರಾಯಣ್ ಶೆಣೈ ಕೆ., ಗೋವಾದ ಉದ್ಯಮಿ ರಾಘವ ಎಂ. ಶೆಟ್ಟಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ರಾಮಚಂದ್ರ ಅಡಿಗ ಜಿ. ಅಭ್ಯಾಗತರಾಗಿ ಭಾಗವಹಿಸಿದ್ದರು. ಸಂಸ್ಥೆಯ ದಾನಿಗಳಾದ ಯು. ವಿಶ್ವನಾಥ ಶೆಣೈ, ಡಾ. ಯು. ಸಿ. ನಿರಂಜನ್, ವಿಲಾಸಿನಿ ಬಿ. ಶೆಣೈ, ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ವಿ.ಜಿ ಶೆಟ್ಟಿ, ಶಿಬಿರದ ಸಂಯೋಜಕರುಗಳಾದ ಎ. ನಟರಾಜ ಉಪಾಧ್ಯ, ಅಶೋಕ್ ಎಂ., ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕರಾದ ಪ್ರವೀಣ್ ಗುಡಿ ಮತ್ತು ಅವರ ತಂಡವನ್ನು ಗೌರವಿಸಲಾಯಿತು. ಶಿಬಿರಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. 230 ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದಿದ್ದು ಶಿಬಿರದಲ್ಲಿ ವೃತ್ತಿ ಮಾರ್ಗದರ್ಶನ, ಸಂವಹನ ಕೌಶಲ, ಆಂಗ್ಲಭಾಷಾ ಕೌಶಲ, ಗುಂಪು ಚರ್ಚೆ ಮೊದಲಾದವುಗಳ ಕುರಿತು ತರಬೇತಿ ನೀಡಿ ಅವರ ಆತ್ಮ ವಿಶ್ವಾಸವನ್ನು ಗುರುತಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್ ಸ್ವಾಗತಿಸಿದರು, ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ಎಮ್. ಹೆಗಡೆ ವಂದಿಸಿದರು.

 
 
 
 
 
 
 
 
 
 
 

Leave a Reply