ಅಂಬೇಡ್ಕರ್ ಓದು ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ
ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟೇಶ್ವರ ಇವರ ಸಹಯೋಗದಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ಗೊಲ್ಲ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ಪೀಳಿಗೆ ಉದ್ಯೋಗ ಮತ್ತು ಸಾಮಾಜಿಕ ನ್ಯಾಯ ಪಡೆಯಬೇಕಾದರೆ ಡಾ. ಬಿ. ಆರ್ ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟದ ಬದುಕನ್ನು ಆಳವಾಗಿ ಅಧ್ಯಯನ ಮಾಡಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್ ನಾಯಕ್ ಮಾತನಾಡಿ, ಶಿಕ್ಷಣ ತಜ್ಙ ಹಾಗೂ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ದೇಶ ಕಂಡ ಅಪರೂಪದ ವ್ಯಕ್ತಿ. ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಿಸ್ತಿನ ಜೀವನ ರೂಪಿಸಿಕೊಳ್ಳಿ ಎಂದರು.

ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಶ್ರೀಕಾಂತ್ ಅಂಬೇಡ್ಕರ್ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅಂಬೇಡ್ಕರ್ ಕುರಿತ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಉಷಾದೇವಿ, ಐಕ್ಯೂಎಸಿ ಸಂಚಾಲಕ ನಾಗರಾಜ ಯು, ಬೋದಕ ಬೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಡಾ. ಶ್ರೀಮತಿ ಅಡಿಗ ವಂದಿಸಿದರು.

 
 
 
 
 
 
 
 
 
 
 

Leave a Reply