Janardhan Kodavoor/ Team KaravaliXpress
25.6 C
Udupi
Sunday, July 3, 2022
Sathyanatha Stores Brahmavara

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll. ಬಿ.ಆರ್ ಅಂಬೇಡ್ಕರ್ ಅವರ 131 ನೇ ಜನ್ಮದಿನಾಚರಣೆ ಸಮಾರಂಭ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಹಾಗೂ ಪ.ಜಾತಿ/ಪ. ವರ್ಗಗಳ ಸಂಘಟನೆಗಳು, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 14-04-2022 ರಂದು ಆಯೋಜಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll. ಬಿ.ಆರ್ ಅಂಬೇಡ್ಕರ್ ಅವರ “131 ನೇ ಜನ್ಮದಿನಾಚರಣೆ ಸಮಾರಂಭ”ದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಡಾll. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿ ಬಳಿಕ ರಜತಾದ್ರಿ, ಮಣಿಪಾಲ ಜಿಲ್ಲಾಡಳಿತ ಸಂಕೀರ್ಣ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಮತ್ತು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ವೀಣಾ, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅನಿತಾ ವಿ. ಮಡ್ಲೂರ್ ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!