ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಅವರಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಅವರಿಗೆ  ಸೋಂಕು ದೃಢಪಟ್ಟಿದ್ದು, ತಮ್ಮದೇ ಟ್ವೀಟ್​ನಲ್ಲಿ ಬಹಿರಂಗ ಪಡಿಸಿದ್ದಾರೆ. ಸದ್ಯಕ್ಕೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಮಿತ್ ಶಾ , ಕೊರೋನಾ ಆರಂಭಿಕ ರೋಗಲಕ್ಷಣಗಳನ್ನು ಗೋಚರಿಸಿದ ಪರಿಣಾಮ ನಾನು ಕೋವಿಡ್ ಪರೀಕ್ಷೆಯನ್ನು ಮಾಡಿದ್ದು, ವರದಿ ಪಾಸಿಟಿವ್  ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ, ಆದರೆ ವೈದ್ಯರ ಸಲಹೆಯ ಮೇರೆಗೆ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.’ ಇದೇ ವೇಳೆ ಅವರು ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರು ತಮ್ಮನ್ನು ತಾವು ರೀಕ್ಷಿಸಿಕೊಳ್ಳುವಂತೆ ಅವರು ಕೋರಿದ್ದಾರೆ

Leave a Reply