ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡು​ಬಂದಲ್ಲಿ ಕಾನೂನು ಕ್ರಮ- ​ ಪೌರಾಯುಕ್ತ ​ಆನಂದ​ ಕಲ್ಲೋಳಿಕರ್

ಉಡುಪಿ​: : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ, ಅಂಗಡಿ​ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ ಮತ್ತು ಮಾರಾಟಗಾರರು, ಯಾವುದೇ​ ದಪ್ಪದ, ಯಾವುದೇ ರೀತಿಯ ಪ್ಲಾಸ್ಟಿಕ್ ಚೀಲಗಳು, ನಾನ್ ಓವೆನ್ ಚೀಲಗಳು, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್​​ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ.

ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್​ ​ಮೈಕೋ ಬೀಡ್ಸ್ನಿಂದ ತಯಾರಾದಂತಹ ಮೇಲ್ಕಂಡ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ,ಮಾರಾಟ ಮತ್ತು ವಿತರಣೆ ಮಾಡುವುದನ್ನು ರಾಜ್ಯಾದ್ಯಂತ ನಿಷೇಧಿಸಲಾಗಿದ್ದು, ನಿಷೇಧಿತ ಪ್ಲಾಸ್ಟಿಕ್ ವಸ್ತಗಳಮಾರಾಟ ಕಂಡು ​ಬಂದಲ್ಲಿ ಪ್ರಥಮ ಬಾರಿಗೆ 1000 ರೂ., ದ್ವಿತೀಯ ಬಾರಿಗೆ 2000 ರೂ., ದಂಡವನ್ನು ವಿಧಿಸಿ ನಿಷೇಧಿತ​ ಪ್ಲಾಸಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ತೃತೀಯ ಬಾರಿಗೆ ಉದ್ದಿಮೆ ಪರವಾನಿಗೆ ರದ್ದುಪಡಿಸಲು ಕ್ರಮ​ ಕೈಗೊಳ್ಳಲಾಗುವುದು.​ ನಗರಸಭಾ ವ್ಯಾಪ್ತಿಯ ವಿಶ್ವೇಶ್ವರಯ್ಯ ದಿನವಹಿ ಮಾರುಕಟ್ಟೆ, ಸಂತೆಕಟ್ಟೆ ಮಾರುಕಟ್ಟೆ, ಪರ್ಕಳ ಮಾರುಕಟ್ಟೆ, ಆದಿಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಮತ್ತು ಬೀದಿ ಬದಿ ವ್ಯಾಪಾರಸ್ಥರಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟಕಂಡು ಬಂದಿದ್ದು, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಮಾರಾಟ ಕಂಡು ಬಂದಲ್ಲಿ ಎಲ್ಲಾ ವ್ಯಾಪಾರಸ್ಥರಿಗೆವಿಧಿಸುವ ದಂಡವನ್ನು ನೇರವಾಗಿ ಸುಂಕ ವಸೂಲಿ ಮಾಡುವ ಗುತ್ತಿಗೆದಾರರಿಂದ ದಂಡ ವಸೂಲಿ ಮಾಡಲಾಗುವುದು​. 
 
ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು​ ನಗರಸಭೆಯ ಪೌರಾಯುಕ್ತ ಆನಂದ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply