ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅಣ್ಣ ಅಂದರ್

ಒಡಹುಟ್ಟಿದ 16 ವರ್ಷದ ತಂಗಿಯ ಮೇಲೆ ಕಾಮುಕ ಅಣ್ಣನೊಬ್ಬ ಅತ್ಯಾಚಾರ ವೆಸಗಿ ಆಕೆಯನ್ನು ಗರ್ಭಿಣಿ ಮಾಡಿರುವ ಹೇಯ ಕೃತ್ಯ  ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಗಿರಿದರ್ಶಿನಿ ನಗರದಲ್ಲಿ ಈ ಅಮಾನುಷ ಘಟನೆ ನಡೆದಿದ್ದು, ಆರೋಪಿ ವಿನಯ್ ಕುಮಾರ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕವಯಸ್ಸಿನಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತೆ ತಂಗಿ, ಅಣ್ಣನೊಂದಿಗೆ ಜೀವನ ನಡೆಸುತ್ತಿದ್ದಳು.   ಈಕೆಗೆ ಇಬ್ಬರು ಅಣ್ಣಂದಿರು ಹಾಗೂ ಇಬ್ಬರು ಅಕ್ಕಂದಿರಿದ್ದು, ಅಕ್ಕಂದಿರಿಗೆ ವಿವಾಹವಾದ ಕಾರಣ ಇಬ್ಬರು ಅಣ್ಣಂದಿರ ಜೊತೆ ಬಾಲಕಿ ಆಶ್ರಯ ಪಡೆದಿದ್ದಳು.

 ಅದರಲ್ಲಿ  ಕಿರಾತಕ ಅಣ್ಣ ವಿನಯ್ ಕುಮಾರ್ ಕುಡಿತದ ಚಟಕ್ಕೆ ದಾಸನಾಗಿದ್ದ , ಅಮಲಿನಲ್ಲಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಕಳೆದ ಮೂರು ತಿಂಗಳಿಂದ ಅತ್ಯಾಚಾರ ಎಸಗಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಶನಿವಾರ ಈ ಘಟನೆ ಬೆಳಕಿಗೆ ಬಂದಿದ್ದು, ಮೈಸೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಪ್ರಾಪ್ತೆಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿನಯ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸದ್ಯಕ್ಕೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

 
 
 
 
 
 
 
 
 
 
 

Leave a Reply