ಉಡುಪಿ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ರಘುಪತಿ ಭಟ್ ಕೇಂದ್ರ ಭೂ ಸಾರಿಗೆ ಸಚಿವರಿಗೆ ಮನವಿ 

ತೀರ್ಥಹಳ್ಳಿ : ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಹೆಬ್ರಿ- ಹಿರಿಯಡ್ಕ ವರೆಗೆ ದ್ವಿಪಥ ರಸ್ತೆ, ಹಿರಿಯಡ್ಕ ದಿಂದ ಪರ್ಕಳ ವರೆಗೆ ಹಾಗೂ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಸಂಬಂಧ ಇಂದು ಮಾ. 23‌ರಂದು ಸಂಸದೆ ಶೋಭಾ ಕರಂದ್ಲಾಜೆಯ ನೇತೃತ್ವದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದರು.

ಪ್ರಸ್ತಾವನೆಯಲ್ಲಿ ಆದಿ ಉಡುಪಿಯಿಂದ ಮಲ್ಪೆವರೆಗೆ ರಸ್ತೆ ಅಭಿವೃದ್ಧಿಗೆ ಭೂಸ್ವಾಧೀನ ಪಡಿಸಿಕೊಳ್ಳಲು ತಕ್ಷಣದಲ್ಲಿ ರೂ. 24.08 ಕೋಟಿ ಬಿಡುಗಡೆ ಮಾಡುವುದು ಹಾಗೂ ಹೆಬ್ರಿ- ಹಿರಿಯಡ್ಕ ದ್ವಿಪಥ ರಸ್ತೆ, ಹಿರಿಯಡ್ಕ – ಪರ್ಕಳ ಮತ್ತು ಆದಿಉಡುಪಿ – ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ರೂ. 288.00 ಕೋಟಿ ಅನುದಾನ ಬಿಡುಗಡೆಗೊಳಿಸಲು ಮನವಿ ಸಲ್ಲಿಸಲಾಯಿತು.ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವರಾದ ಶ್ರೀಯುತ ನಿತಿನ್ ಗಡ್ಕರಿ ಯವರು ತಕ್ಷಣದಲ್ಲಿ ಯೋಜನೆ ಕಾರ್ಯಗತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.ನಿತಿನ್ ಗಡ್ಕರಿಗೆ ಶಾಸಕ ರಘುಪತಿ ಭಟ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

 
 
 
 
 
 
 
 
 

Leave a Reply