ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿ; ಬೈಕ್ ಸವಾರ ಮೃತ್ಯು!

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.

ತನ್ನ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರೂ ಕ್ಯಾರೇ ಅನ್ನದ ಗೃಹ ಸಚಿವರು ವಾಹನ ನಿಲ್ಲಿಸದೆ ಸ್ಥಳದಿಂದ ಜಾಗ ಖಾಲಿ ಮಾಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಗಂಡಸಿ ಗ್ರಾಮದ ನಿವಾಸಿ ರಮೇಶ್‌ (45) ಪೆಟ್ರೋಲ್ ಬಂಕ್‌ನಿಂದ ಹೊರ ಬರುತ್ತಿದ್ದಾಗ ಕೆಎ 13 ಜಿ 1467 ಸಂಖ್ಯೆಯ ಪೊಲೀಸ್ ವಾಹನ ಡಿಕ್ಕಿಯಾಗಿದ್ದು, ಪರಿಣಾಮ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಮೇಶ್ ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

 
 
 
 
 
 
 
 
 
 
 

Leave a Reply