ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಬದ್ಧವಾಗಿದೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ

ಹೊರದೇಶದಿಂದ ಕಡಿಮೆ ಬೆಲೆಗೆ ಅಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರರನ್ನು ಕಂಗೆಡಿಸಿತ್ತು, ನಮ್ಮ ರಾಜ್ಯದ ಅಡಿಕೆ ಬೆಲೆಯನ್ನು ತೀವ್ರವಾಗಿ ಬಾಧಿಸಿತ್ತು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನಮ್ಮ ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರದೇಶಗಳಿಂದ ಆಮದಾಗುವ ಅಡಿಕೆ ಬೆಳೆಯ ಆಮದು ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಿಂದಿನ ₹251 ಕನಿಷ್ಠ ಆಮದು ದರವನ್ನು ₹100 ಗಳಿಂದ, ₹351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರೂ ₹351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡಬೇಕಾಗಿದೆ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರದ ಈ ಆದೇಶ, ದೇಶೀಯ ಮಾರುಕಟ್ಟೆಯಲ್ಲಿ ನಮ್ಮ ರೈತರ ಅಡಿಕೆಗೆ ಹೆಚ್ಚಿನ ಬೆಲೆ ದೊರಕಿಸಿಕೊಡುವಲ್ಲಿ ಸಹಾಯಕವಾಗಲಿದೆ.

ವಿದೇಶಿ ಅಡಿಕೆಗಳ ಮೇಲಿನ ಕನಿಷ್ಠ ಆಮದು ಬೆಲೆಯನ್ನು ₹351ಕ್ಕೇ ಏರಿಸುವ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಡೆ ಸ್ವಾಗತ.

 
 
 
 
 
 
 
 
 
 
 

Leave a Reply