ಆರೂರು: ಆರೋಗ್ಯ ಉಚಿತ ತಪಾಸಣಾ ಶಿಬಿರ

ಆರೂರು ನೀಲಮ್ಮ ಚಾರಿಟೇಬಲ್ ಟ್ರಸ್ಟ್, ಆರೂರು ಗ್ರಾಮ ಪಂಚಾಯಿತಿ, ಉದ್ಯಮಿ ರತ್ನಾಕರ ಶೆಟ್ಟಿ, ಆರೂರು ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕ ವರ್ಗ, ವಿಷ್ಣುಮೂರ್ತಿ ಫ್ಯೂಯೆಲ್ಸ್ ಮತ್ತು ಡಾ.ಎಂ.ಪಿ ರಾಘವೇಂದ್ರ ರಾವ್ ಅವರ ಅಭಿಮಾನಿ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಆರೂರು ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ನಿವೃತ್ತ ಆರೋಗ್ಯಾಧಿಕಾರಿ ದಿ.ಪಟೇಲ್ ಡಾ.ಎಂ.ಪಿ.ರಾಘವೇoದ್ರ ರಾವ್ ಅವರ ಪ್ರಥಮ ಪುಣ್ಯ ಸ್ಮರಣೆಯ ಪ್ರಯುಕ್ತ ನಡೆದ ಉಚಿತ ವೈದ್ಯಕೀಯ ತಪಾಸಣೆ ಮತ್ತು ಉಚಿತ ಔಷಧ ವಿತರಣಾ ಕಾರ್ಯಕ್ರಮ ಭಾನುವಾರ ನಡೆಯಿತು.
ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಜಾತಿಯ ಗಡುವನ್ನು ದಾಟಿದಾಗ ಮಾತ್ರ ಭಾರತ ಜಗತ್ತಿನಲ್ಲಿ ಭವ್ಯ ಭಾರತ ಆಗಲು ಸಾಧ್ಯ ಎಂದರು. ಡಾ.ರಾಘವೇಂದ್ರ ರಾವ್ ಇತರರಿಗೆ ಮಾದರಿಯಾಗಿ ಬದುಕು ಸಾಗಿಸಿದವರು ಎಂದರು. ಉಡುಪಿ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ.ಜಿ.ಎಸ್ ಚಂದ್ರಶೇಖರ ದಿ.ಡಾ.ಎಂ.ಪಿ ರಾಘವೇಂದ್ರ ರಾವ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ನಿಯಮಿತ ಆಹಾರ ಪದ್ದತಿ, ಉತ್ತಮ ಜೀವನಶೈಲಿಯಿಂದ ಮಾತ್ರ ಉತ್ತಮ ಆರೋಗ್ಯ ಸಾಧ್ಯ ಎಂದು ಕರೆ ನೀಡಿದರು.
ಆರೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಭಟ್ ಆರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೋಹನ್ ರಾವ್ ಆರೂರು, ಉದ್ಯಮಿಗಳಾದ ಉಪ್ಪೂರು ರತ್ನಾಕರ ಶೆಟ್ಟಿ, ಆರೂರು ಶ್ರೀಧರ ಶೆಟ್ಟಿ ಆರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತ ಶೆಟ್ಟಿ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಆರೂರು ತಿಮ್ಮಪ್ಪ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾವಂಜೆ ನಾಗರಾಜ ಹೆಗ್ಡೆ ಸ್ವಾಗತಿಸಿದರು. ಗಿರಿಧರ್ ಭಟ್ ಆರೂರು ವಂದಿಸಿದರು. ಆರೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗುರುರಾಜ ರಾವ್ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply