ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಣೆ ರಕ್ತದಾನ ಶಿಬಿರ

ಉಡುಪಿ :- ಆಶ್ರಿತ್ ನಸಿ೯oಗ್ ಕಾಲೇಜು ಕೋಟ, ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಆ.27ರಂದು ಕಾಲೇಜಿನ ಸಭಾಂಗಣದಲ್ಲಿ 75 ಯೂನಿಟ್ ರಕ್ತದಾನ ಶಿಬಿರ ನಡೆಯಿತು.

ಶಿಬಿರದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿ, ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನಗಳಲ್ಲಿ ಒಂದಾಗಿದೆ. ಸಮಾಜದ ನಿಜವಾದ ಹಿರೋ ಆಗಿರುವ ರಕ್ತದಾನಿಯು ತನ್ನ ರಕ್ತದಾನದಲ್ಲಿ 3 ಜನರ ಜೀವ ಉಳಿಸುವ ಕಾಯ೯ ಮಾಡಬಹುದು. ಕರೋನಾ ಕಾಲದಲ್ಲಿ ಆರೋಗ್ಯ ವ್ಯವಸ್ಥೆಯ ಕಾಯ೯ ಮರೆಯಲು ಅಸಾಧ್ಯ ಎಂದರು. ಕಾಯ೯ಕ್ರಮದಲ್ಲಿ , ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,, ರೆಡ್ ಕ್ರಾಸ್ ಸಭಾಪತಿ ಜಯಕರ ಶೆಟ್ಟಿ, ವೈದ್ಯಕೀಯ ಪ್ರಕೋಷ್ಠ ರಾಜ್ಯ ಸದಸ್ಯ ಡಾ| ವಿಜಯಿಂದ್ರ ರಾವ್, ಸಂಚಾಲಕ ಡಾII ರಾಮಚಂದ್ರ ಕಾಮತ್, ಸಹ ಸಂಚಾಲಕ ಡಾII ವಿದ್ಯಾಧರ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು. ಈ ಸಂದಭ೯ದಲ್ಲಿ ಯುವ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾಯ೯ಕ್ರಮಗಳನ್ನು ಉದ್ಘಾಟಿಸಲಾಯಿತು.

 
 
 
 
 
 
 
 
 
 
 

Leave a Reply