ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಅಶ್ವಥ್ ನಾರಾಯಣ್ ಜೂನ್ 29ಕ್ಕೆ ಕುಂದಾಪುರಕ್ಕೆ

ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಅಶ್ವಥ್ ನಾರಾಯಣ್‌ರವರು ಜೂನ್ 29ರಂದು ಕುಂದಾಪುರದ ಭಂಡಾರ್‌ಕರ್ಸ್ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಯೋಗ ಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ರಾಜ್ಯದ ವಿವಿಧ 50ಕ್ಕೂ ಮಿಕ್ಕಿ ಅತ್ಯುತ್ತಮ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಈಗಾಗಲೇ ಸುಮಾರು 3000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ನೊಂದಣಿ ಮಾಡಿಕೊಂಡಿದ್ದು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ವಹಿಸಿಕೊಳ್ಳಲಿದ್ದು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಇಂಧನ ಸಚಿವ ಶ್ರೀ ಸುನೀಲ್ ಕುಮಾರ್, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿಯವರ ಸಹಿತ ಜಿಲ್ಲೆಯ ಎಲ್ಲಾ ಶಾಸಕರು, ಜನ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

 
 
 
 
 
 
 
 
 

Leave a Reply